ದಿನಾಂಕ 20.12.2022 ರಂದು ಮತದಾರರ ಪಟ್ಟಿ ವಿಶೇಷ ಸಂಕ್ಷೀಪ್ತ ಪರಿಷ್ಕರಣೆಸೂಪರ್ ಚೆಕ್ಕಿಂಗ್ ಗಾಗಿ ಸುರಪುರ ತಾಲೂಕಿನ ಸತ್ಯಂಪೇಟ ಮತ್ತು ಕೃಷ್ಣಾಪುರ,ಬಿಜಾಸಪುರ, ಗ್ರಾಮದ ಮನೆಗಳಿಗೆ ಭೇಟಿ ನೀಡಲಾಯಿತು.
ದಿನಾಂಕ 03.12.2022 ರಂದು ಮತದಾರರ ಪಟ್ಟಿ ಪರಿಷ್ಕರಣೆ ಮನೆ ಮನೆ ಸಮೀಕ್ಷೆ ಹಿನ್ನೆಲೆ ಯಾದಗಿರಿ , ವಡಿಗೇರಾ ತಾಲೂಕಿನ ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ಮತ್ತು ಮನೆಗಳಿಗೆ ಬೇಟಿ ನೀಡಲಾಯಿತು.
ದಿನಾಂಕ 26.11.2022 ರಂದು ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಂಕ 25.11.2022 ರಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿತ್ತ ಪರಿಷ್ಕರಣೆ 2023 ರ ಅಂಗವಾಗಿ ಯಾದಗಿರಿ ನಗರದ ಮತಗಟ್ಟೆ ಸಂಖ್ಯೆ 52,54 ರ ವ್ಯಾಪ್ತಿಯಲ್ಲಿ ಬರುವ ಮನೆ ಮನೆ ಸಮೀಕ್ಷೆ ಕಾರ್ಯದ ಪ್ರಗತಿಯನ್ನು ಪರಿಶೀಲನೆ ಮಾಡಲಾಯಿತು.
ದಿನಾಂಕ 24.11.2022ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೂಕ್ತ ಪ್ರೋತ್ಸಾಹ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಹೆಜ್ಜೆಗೊಂದು ದಾರಿ, ವಿದ್ಯಾರ್ಥಿಗಳೊಂದಿಗೆ ಸಂವಾದಲ್ಲಿ ಭಾಗವಹಿಸಲಾಯಿತು.
ದಿನಾಂಕ 17.11.2022 ರಂದು ಯಾದಗಿರಿ ನಗರದ ಸರ್ಕಾರಿ ಪ್ರೌಢಶಾಲೆ ಸ್ಟೇಶನ ಬಜಾರ ಶಾಲೆಯಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಎಸ್ ಟಿ ಇ ಪಿ ಎಸ್), ವರ್ಣಾಜ್ ಟೆಕ್ನಾಲಜಿಸ್ ತಾರೇ ಜಮೀನ್ ಪರ್ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಹಯೋಗದ “ಶಾಲೆಯ ಅಂಗಳದಲ್ಲೆ ಸಂಚಾರಿ ಡಿಜಿಟಲ್ ತಾರಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳ ಪರಿಚಯ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಾಗೂ ಸಹಾಯಕ ಆಯುಕ್ತರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ, ಜಿಲ್ಲಾ ಪಂಚಾಯತ ಮತ್ತು ವಿವಿಧ ಕಡೆ ಪ್ರತ್ಯಕ್ಷವಾಗಿ ವೀಕ್ಷಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಯಿತು
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023 ರ ಕರಡು ಮತದಾರರ ಪಟ್ಟಿಯು ನವೆಂಬರ್ 9 ರಂದು ಪ್ರಕಟಣೆಗೊಂಡಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಯಾದಗಿರಿ ನಗರದಲ್ಲಿ ಸ್ವಪ್ನ ಗ್ರೌಂಡ್ ನಿಂದ ಗಾಂಧಿ ವೃತ್ತದ ವರೆಗೆ ವಿದ್ಯಾರ್ಥಿಗಳೊಂದಿಗೆ ವಾಕ್ ಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾನ ಕುರಿತು ಅರಿವು ಮೂಡಿಸಲಾಯಿತು.
ದಿನಾಂಕ 06.11.2022 ರಂದು ನಡೆದ ಶಿಕ್ಷಕರ ಅರ್ಹತಾ ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಲಾಯಿತು.
ದಿನಾಂಕ 24.9.2022ರಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾನೂನು ಸೇವೆಗಳ ಬೃಹತ್ ಶಿಬಿರದಲ್ಲಿ ಪಾಲಗೊಳ್ಳಲಾಯಿತು.