ದಿನಾಂಕ 09.09.2022ರಂದು ಜುಲೈ ಮತ್ತು ಅಗಸ್ಟ ಮಾಹೆಯಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿಯ ಕುರಿತು ಕೇಂದ್ರ ಸರ್ವೇಷಣೆಗಾಗಿ ಜಿಲ್ಲೆಗೆ ಆಗಮಿಸಿದ ಕೇಂದ್ರಿಯ ತಂಡದೊಂದಿಗೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಬೇಟಿ ನೀಡಲಾಯಿತು.
ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಕಾರ್ಯ
ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಕಾರ್ಯ
ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ‘ಹರ್ ಘರ್ ತಿರಂಗಾ’ ಅಭಿಯಾನ
ದಿನಾಂಕ 20.7.2022 “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಜಿಲ್ಲಾಧಿಕಾರಿ ಅವರು ಸುರಪುರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಗರದಲ್ಲಿನ ತಾಲೂಕು ಆಸ್ಪತ್ರೆ, ನಗರಸಭೆ ಕಾರ್ಯಲಯಕ್ಕೆ ಭೇಟಿ ನೀಡಿಲಾಯಿತು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಕೃತಕ ಬುದ್ಧಿವಂತಿಕೆ (Artificial intelligence ) ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ ಮಾಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ತಾಲೂಕಿನ ದೋರನಹಳ್ಳಿ ಎಮ್ಮೆ ಸಂಶೋಧನಾ ಮತ್ತು ತರಬೇತಿ ಸಂಸ್ಥೆಗೆ ಭೇಟಿ ನೀಡಿ ಈ ಸಂಸ್ಥೆಯಲ್ಲಿನ ಮುರ್ರಾ ತಳಿಯ ಎಮ್ಮೆಗಳ ನಿರ್ವಹಣೆ ಬಗ್ಗೆ, ಮೇವಿನ ಬೆಳೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ದೋರನಹಳ್ಳಿ ಅಂಗನವಾಡಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಿನಾಂಕ 12.7.2022 ರಂದು ಬಸವ ಸಾಗರ ಜಲಾಶಯ ( ನಾರಾಯಣ ಪುರ ಡ್ಯಾಂ) ಗೆ ಭೇಟಿ ನೀಡಿ ಸಂಬಂಧಿಸಿದ ಅಧಿಕಾರಿಗಳಿಗೆ ಪ್ರವಾಹ ಸಂಬಂಧ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಸೂಚಿಸಲಾಯಿತು.
ದಿನಾಂಕ 05.7.2022 ರಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.