ದಿನಾಂಕ 19.3.2022 ರಂದು ಮಾನ್ಯ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಹಿನ್ನಲೆಯಲ್ಲಿ, ದೇವತ್ಕಲ್ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ನಡೆಸಲಾಯಿತು.
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ “ಕಾನೂನು ಅರಿವು ಕಾರ್ಯಕ್ರಮ” ಜಿಲ್ಲಾ ಮಟ್ಟದ ಸ್ತ್ರೀ ಶಕ್ತಿ ಮತ್ತು ಸ್ವ- ಸಹಾಯ ಸಂಘಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ತೋಟಗಾರಿಕೆ ಇಲಾಖೆ ವತಿಯಿಂದ ” ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ದಿನಾಂಕ 22.02.2022 ರಂದು ಜಿಲ್ಲಾಡಳಿತ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯಾದಗಿರಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ವಲಸೆ ಕೇಂದ್ರದ ಸೌಲಭ್ಯಗಳ ಕುರಿತು ಒಂದುದಿನದ ಕಾರ್ಯಾಗಾರ ಹಾಗೂ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ದಿನಾಂಕ 19.02.2022 ರಂದು ಹುಣಸಗಿ ತಾಲೂಕಿನ ಗ್ರಾಮ ಪಂಚಾಯತಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಮಾರನಾಳ ಗ್ರಾಮದ ಅಂಗನವಾಡಿ ಕೇಂದ್ರ ಭೇಡಿ ನೀಡಿ ಮಕ್ಕಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲಿಸಲಾಯಿತು.
ದಿನಾಂಕ 19.02.2022 ರಂದು ಹುಣಸಗಿ ತಾಲೂಕಿನ ಮಾರನಾಳ ಗ್ರಾಮ ಪಂಚಾಯತಿಯಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಮಾನ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲನೆಯ ಕುರಿತು ಯಾದಗಿರಿ ನಗರದ ಸರ್ಕಾರಿ ಉರ್ದು ಮತ್ತು ಕನ್ನಡ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.
ದಿನಾಂಕ 16.2.2022 ರಿಂದ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳು ಪುನರ್ ಪ್ರಾರಂಭವಾಗುವ ಹಿನ್ನಲೆಯಲ್ಲಿ ಮಾನ್ಯ ಉಚ್ಛ ನಾಯ್ಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ, ಸಂಬಂಧಿಸಿದ ಅಧಿಕಾರಿಗೆಳಿಗೆ ವಿಡಿಯೋ ಸಂವಾದ ಮೂಲಕ ಸೂಚಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ ಜೀತ ಪದ್ದತಿ ರದ್ದತಿ ದಿನಾಚರಣೆಯನ್ನು ಆಚರಿಸಲಾಯಿತು.
ಡಿಜಿಟಲ್ ಭಾರತ ಕಾರ್ಯಕ್ರಮದ ಅಂಗವಾಗಿ ಭಾರತ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಡೆಲ್ ಟೆಕ್ನಾಲಜೀಸ್, ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಹಾಗೂ ಡಿಜಿಟಲ್ ಇಂಡಿಯಾ ಕಾರ್ಯಕ್ರಮವಾದ ಸಾಮಾನ್ಯ ಸೇವಾ ಕೇಂದ್ರಗಳ ಯೋಜನೆಯ ಸಹಯೋಗದೊಂದಿಗೆ ಡಿಜಿಟಲ್ ಸೇವೆ ತಲುಪಿಸುವ ವಾಹನಕ್ಕೆ ಚಾಲನೆ ನೀಡಲಾಯಿತು .
ದಿನಾಂಕ 27.1.2022 ರಂದು ಶಹಾಪುರ ತಾಲೂಕಿನ ಹೋತಪಟ ಜವಾಹರ ನವೋದಯ ವಿದ್ಯಾಲಯದಲ್ಲಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿ ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಬೇಕಾದ ಔಷಧಿ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡಿ ಅಲ್ಲದೇ ಸೋಂಕು ಉಲ್ಬಣಗೊಳ್ಳದಂತೆ ಕ್ರಮ ವಹಿಸಲು ಸೂಚಿಸಲಾಯಿತು. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ಒಂದು ವಾರ ರಜೆ ಘೋಷಿಸಿಲಾಯಿತು