73 ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಜಿಲ್ಲಾಡಳಿತದ ವತಿಯಿಂದ, 12 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.
ದಿನಾಂಕ 22.01.2022 ರಂದು ಗೌರವಾನ್ವಿತ ಪ್ರಧಾನ ಮಂತ್ರಿಗಳು, ಮಹತ್ವಾಕಾಂಕ್ಷೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಲಾಯಿತು. ಗೌರವಾನ್ವಿತ ಪ್ರಧಾನ ಮಂತ್ರಿಯವರು ಯಾದಗಿರಿ ಜಿಲ್ಲೆಯು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಮತ್ತು ಈ ಯೋಜನೆಯ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದರು.
ದಿನಾಂಕ 19.01.2022 ರಂದು ಯಾದಗಿರಿ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-19 ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ಮಾಸ್ಕನ್ನು ವಿತರಿಸಿ, ಸಾಮಾಜಿಕ ಅಂತರವನ್ನು ಪಾಲಿಸಲು ತಿಳಿಸಿ ಕೋವಿಡ-19 ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ 16.01.2022 ರಂದು ವಾರಾಂತ್ಯದ ನಿರ್ಬಂಧ(ಕರ್ಪ್ಯೂ) ಪ್ರಯುಕ್ತ ಯಾದಗಿರಿ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-19 ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ದಂಡ ಹಾಕಿಸಿ ಮಾಸ್ಕನ್ನು ವಿತರಿಸಿ ಕೋವಿಡ-19 ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ 12.01.2022 ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಯಾದಗಿರಿ ತಾಲೂಕಿನ ಸರಕಾರಿ ಮಹಾವಿದ್ಯಾಲಯದಲ್ಲಿ ಯುವ ಸಪ್ತಾಹ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.
ದಿನಾಂಕ 11.1.2022 ರಂದು ಸುರಪುರ ತಾಲೂಕ ಆಸ್ಪತ್ರೆಗೆ ಬೇಟಿ ನೀಡಿ ಕೋವಿಡ್ ಮೂರನೇ ಅಲೆ ತಡೆಗಟ್ಟುವ ಬಗ್ಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಯಿತು.
ದಿನಾಂಕ 09.01.2022 ರಂದು ವಾರಾಂತ್ಯದ ನಿರ್ಬಂಧ(ಕರ್ಪ್ಯೂ) ಪ್ರಯುಕ್ತ ಶಹಾಪುರ ನಗರದಲ್ಲಿ ಪ್ರದಕ್ಷಿಣೆ ನಡೆಸಿ ಸಾರ್ವಜನಿಕರು ಕೋವಿಡ-೧೯ ಸುರಕ್ಷತಾ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲಿಸಿ ಮಾಸ್ಕ ಧರಿಸದವರಿಗೆ ದಂಡ ಹಾಕಿಸಿ ಮಾಸ್ಕನ್ನು ವಿತರಿಸಿ ಕೋವಿಡ-೧೯ ಕುರಿತು ಜಾಗೃತಿ ಮೂಡಿಸಲಾಯಿತು.
ದಿನಾಂಕ 09.01.2020 ರಂದು ಶಹಾಪೂರ ತಾಲೂಕಿನ ಬೇವಿನಹಳ್ಳಿ(ಜೆ) ಮೂರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆಯ ವಿದ್ಯಾರ್ಥಿಯು ದಿನಾಂಕ 08.01.2022 ಕಾಲುವೆಯಲ್ಲಿ ಕೊಚ್ಚಿಹೊದ ಕುರಿತು ಸ್ಥಾನಿಕ ಪರಿಶಿಲನೆಮಾಡಿ ಸದರಿ ವಿದ್ಯಾರ್ಥಿಯ ಪೋಷಕರಿಗೆ ಸಾಂತ್ವನ ಹೇಳಲಾಯಿತು.
ದಿನಾಂಕ 03/01/2022 ಜಿಲ್ಲೆಯಲ್ಲಿ 15 ವರ್ಷದಿಂದ 18 ವರ್ಷದ ವಯೋಮಾನದ ಪ್ರೌಢ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕಾಕರಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.