ದಿನಾಂಕ 12.11.21 ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ(ಸ್ಥಳೀಯ ಸಂಸ್ಥೆಗಳ) ಚುನಾವಣೆಯ ಪೂರ್ವ ಸಿದ್ದತಾ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ಮತ್ತು ಪರಿಣಾಮಕಾರಿಯಾಗಿ ಹಾಗೂ ಸುಮಗವಾಗಿ ಜರುಗಿಸಿಕೊಂಡು ಹೋಗುವಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿ, ಪೊಲೀಸ್ ಇಲಾಖೆಯ ಅಧಿಕಾರಿ, ತೆರಿಗೆ ಇಲಾಖೆಯ ಅಧಿಕಾರಿ, ವಾಣಿಜ್ಯ ಇಲಾಖೆಯ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಸಭೆಯನ್ನು ಜರುಗಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶಿಲ್ಪಾಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಚುನಾವಣೆ ತಹಶೀಲ್ದಾರ ಸಂತೋಷ ರಾಣಿ ಎಮ್, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.